ಮಾಧ್ಯಮಗಳಿಗೆ ದರ್ಶನ್ ಕ್ಷಮೆ ಕೇಳಿದ್ದಾರೆ ಎನ್ನಲಾದ ಪತ್ರ: ಸಾಮಾಜಿಕ ಜಾಲತಾಣದಲ್ಲಿ ವೈರಲ್!
ಡಿ ಬಾಸ್ ಮಾಧ್ಯಮಗಳ ಕ್ಷಮೆ ಯಾಚಿಸಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಾವುದೋ ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ-ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ ಎಂದು ದರ್ಶನ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಹರಿದಾಡುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಧ್ಯಮಗಳ ಬಗ್ಗೆ ಅವಾಚ್ಯ ಶಬ್ದಗಳಿಂದ ಜರಿದಿದ್ದಾರೆ ಎಂಬ ಆಡಿಯೋ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. ದರ್ಶನ್ ಮಾತನಾಡಿದ್ದಾರೆ ಎನ್ನಲಾಗಿದ್ದ ಆಡಿಯೋ ವೈರಲ್ ಆಗುತ್ತಿದ್ದಂತೆ ವಿದ್ಯುನ್ಮಾನ ಮಾಧ್ಯಮಗಳು ದರ್ಶನ್ ಅವರನ್ನು ಅವರನ್ನು ಅಘೋಷಿತ […]