ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್-ಎರಡು ಹೊಸ ಮಾರ್ಗದಲ್ಲಿ ಸಂಚಾರ ಆರಂಭ
ಬೆಂಗಳೂರಿನಲ್ಲಿ ಮೆಟ್ರೋ ರೈಲು ಆಗಸ್ಟ್ ತಿಂಗಳಿಂದ ಇನ್ನೂ ಎರಡು ಹೊಸ ಮಾರ್ಗದಲ್ಲಿ ಸಂಚಾರಿಸಲಿದೆ. ಇದರಿಂದಾಗಿ ಬರೋಬ್ಬರಿ 5 ಲಕ್ಷಕ್ಕೂ ಅಧಿಕ ಪ್ರಯಾಣಿಕರಿಗೆ ಸಹಾಯವಾಗಲಿದೆ. ಬೈಯಪ್ಪನಹಳ್ಳಿ- ಕೆ.ಆರ್.ಪುರ ಹಾಗೂ ಕೆಂಗೇರಿ- ಚಲ್ಲಘಟ್ಟದ ನಡುವೆ ಮುಂದಿನ ತಿಂಗಳು ಮೆಟ್ರೋ ಸೇವೆ ಆರಂಭವಾಗಲಿದೆ. ಆಗಸ್ಟ್ ಕೊನೆ ವಾರದಲ್ಲಿ ನೇರಳೆ ಮಾರ್ಗದ ವಿಸ್ತರಿತವಾದ ಬೈಯಪ್ಪನಹಳ್ಳಿ- ಕೆ.ಆರ್.ಪುರ ನಡುವಿನ 2.5 ಕಿ.ಮೀ ಮಾರ್ಗದಲ್ಲಿ ಹೊಸದಾಗಿ ಮೆಟ್ರೋ ರೈಲು ಉದ್ಘಾಟನೆಯಾಗಲಿದೆ. ಕೆಂಗೇರಿ – ಚಲ್ಲಘಟ್ಟ ನಡುವಿನ 1.9 ಮೆಟ್ರೋ ಮಾರ್ಗವೂ ಕೂಡ ವಾಣಿಜ್ಯ ಸೇವೆಗೆ ಮುಕ್ತವಾಗಲಿದೆ […]