Arun Gandhi: ಮಹಾತ್ಮ ಗಾಂಧಿ ಅವರ ಮೊಮ್ಮಗ ನಿಧನ!
ಮಹಾತ್ಮ ಗಾಂಧಿ ಅವರ ಮೊಮ್ಮಗ ಅರುಣ್ ಗಾಂಧಿ(89) ಅವರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಇಹಲೋಕ ತ್ಯಜಿಸಿದ್ದಾರೆ. ತುಂಬಾ ದಿನಗಳಿಂದ ಅವರಿಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದರು. ಅವರ ಅಂತ್ಯಕ್ರಿಯೆ ಕೊಲ್ಹಾಪುರದಲ್ಲಿ ನೆರವೇರಲಿದೆ ಎಂದು ಪುತ್ರ ತುಷಾರ್ ಗಾಂಧಿ ಹೇಳಿದ್ದಾರೆ. ಅರುಣ್ ಗಾಂಧಿ ಅವರು,1934ರ ಏ. 14ರಂದು ಡರ್ಬನ್ ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಜನಿಸಿದ್ದರು. ಸಾಮಾಜಿಕ ಕಾರ್ಯಕರ್ತರಾಗಿ ತಮ್ಮ ತಾತಾನ ಹೆಜ್ಜೆ ಅನುಸರಿಸಿದ್ದರು. ಅರುಣ್ ಗಾಂಧಿ ಅವರು ಕೂಡ ಕೆಲವು ಪುಸ್ತಕಗಳನ್ನು ಬರೆದಿದ್ದಾರೆ. […]