ವಿಧಾನ ಪರಿಷತ್ ಗೆ ಮೂವರು ಅವಿರೋಧ ಆಯ್ಕೆ; ಜಗದೀಶ ಶೆಟ್ಟರ್ ಸದಸ್ಯರಾಗಿ ಆಯ್ಕೆ!
ಬೆಂಗಳೂರು ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್. ಬೋಸರಾಜ್, ತಿಪ್ಪಣ್ಣಪ್ಪ ಕಮಕನೂರ್ ಅವಿರೋಧವಾಗಿ ಆಯ್ಕೆಯಾಗಿದ್ದು, ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದರು. ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಆದರೆ, ಕಣದಲ್ಲಿ ಮೂವರೇ ಅಭ್ಯರ್ಥಿಗಳು ಇದ್ದ ಕಾರಣ ಮೂವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನ ಪರಿಷತ್ ಸದಸ್ಯರಿಗೆ ಕಾಂಗ್ರೆಸ್ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಮಾಜಿ […]