ಮಹಾರಾಷ್ಟ್ರದ ಏಕೈಕ ಕಾಂಗ್ರೆಸ್ ಸಂಸದ ನಿಧನ; ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪಿದ ನಾಯಕ!
ಮಹಾರಾಷ್ಟ್ರ ರಾಜ್ಯದಲ್ಲಿನ ಏಕೈಕ ಕಾಂಗ್ರೆಸ್ ಸಂಸದ ಬಾಲು ಧನೋರ್ಕರ್ (48) ಚಿಕ್ಕ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ. ಬಾಲು ಧನೋರ್ಕರ್ ಅವರು ಮೂತ್ರಪಿಂಡದ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ನಾಗ್ಪುರ ಮೂಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲಿ ಚಿಕಿತ್ಸೆ ಫಲ ನೀಡದ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಪ್ರತಿಭಾ ಧನೋರ್ಕರ್ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಧನೋರ್ಕರ್ ಅವರು ಚಂದ್ರಾಪುರ ಜಿಲ್ಲೆಯಲ್ಲಿ ಶಿವಸೇನೆಯಲ್ಲಿ […]