ಅಂಬಾನಿ ಕುಟುಂಬಕ್ಕೆ ಮತ್ತೊಂದು ಹೆಣ್ಣು ಮಗುವಿನ ಆಗಮನ!
ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಹಿರಿಯ ಪುತ್ರ ಆಕಾಶ್ ಅಂಬಾನಿ ಹಾಗೂ ಶ್ಲೋಕಾ ಅಂಬಾನಿ ದಂಪತಿಗೆ ಬುಧವಾರ ಹೆಣ್ಣು ಮಗು ಜನಿಸಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಮುಕೇಶ್ ಪುತ್ರಿ ಇಶಾ ಅಂಬಾನಿ ಹೆಣ್ಣು ಮತ್ತು ಗಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಇದೀಗ ಮೂರನೇ ಬಾರಿಗೆ ಮುಕೇಶ್ ಮತ್ತು ಪತ್ನಿ ನೀತಾ ಅಂಬಾನಿ ಅಜ್ಜ ಅಜ್ಜಿ ಎನ್ನಿಸಿಕೊಂಡಿದ್ದಾರೆ. ಅತೀ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಕೇಶ್ ಅಂಬಾನಿ ವಿಶ್ವದಲ್ಲಿಯೇ ಅತೀ ದುಬಾರಿ ಖಾಸಗಿ ಮನೆಯನ್ನು ಹೊಂದಿರುವ ವ್ಯಕ್ತಿಯಾಗಿದ್ದಾರೆ. […]