ಕೋಲಾರದಲ್ಲಿ ನಡೆದ ಮರ್ಯಾದಾ ಹತ್ಯೆ: ಮಗಳನ್ನು ಕೊಂದ ತಂದೆ!
Kolar: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾಗಿ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣವನ್ನು ಬಂಗಾರಪೇಟೆಯ ಕಾಮಸಮುದ್ರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ತಾಲೂಕಿನ ಬೋಡಗುರ್ಕಿ ಗ್ರಾಮದ ಕೀರ್ತಿ(20), ಎಂಬ ಹುಡುಗಿಯನ್ನು ಆಕೆಯ ತಂದೆ ಕೃಷ್ಣಮೂರ್ತಿ (46) ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾದ ಅದೇ ಗ್ರಾಮದ ಆಕೆಯ ಪ್ರೇಮಿ ಗಂಗಾಧರ್(24) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವರಿಬ್ಬರೂ ಎರಡು […]