Kicha Sudeep: ಮೊಳಕಾಲ್ಮೂರಿನಲ್ಲಿ ಭರ್ಜರಿ ಪ್ರಚಾರ ಕೈಗೊಂಡ ಕಿಚ್ಚ ಸುದೀಪ್!
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡಿವೆ. ಮತದಾರರನ್ನು ಸೆಳೆಯಲು ರಾಜಕೀಯ ನಾಯಕರು ಸಿನಿಮಾ ತಾರೆಯರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೇ, ರಾಷ್ಟ್ರೀಯ ಪಕ್ಷಗಳು ಕೇಂದ್ರ ನಾಯಕರನ್ನು ಆಹ್ವಾನಿ ಪ್ರಚಾರ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ನಟ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಮೊಳಕಾಲ್ಮೂರು ಪಟ್ಟಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸುದೀಪ್, ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು. ಬಿಜೆಪಿ ಅಭ್ಯರ್ಥಿ […]