Neeraj Chopra: ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಮತ್ತೊಂದು ಗರಿ
ದೋಹಾ: ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ, ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಸಾಧನೆಗೆ ಮತ್ತೊಂದು ಕಿರೀಟದ ಗರಿ ಬಂದಿದೆ. ಖತರ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ದೋಹಾ ಡೈಮಂಡ್ ಲೀಗ್ ಫೈನಲ್ ನಲ್ಲಿ 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ ಟ್ರೋಫಿಗೆ ಮುತ್ತಿಕ್ಕಿದ್ದಾರೆ. ನೀರಜ್ ಕಳೆದ ವರ್ಷ ಜ್ಯುರಿಚ್‌ನಲ್ಲಿ ನಡೆದಿದ್ದ ಡೈಮಂಡ್ ಲೀಗ್ ಫೈನಲ್‌ನಲ್ಲಿ ಚಾಂಪಿಯನ್ ಆಗಿ, ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. […]