ರಾಜಸ್ಥಾನದಲ್ಲಿ ಮುಂದುವರೆದ ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ!
ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನಿದ್ದ ಹಾಸ್ಟೆಲ್ ಕೊಠಡಿಯಲ್ಲಿ ವಿಷ ಸೇವಿಸಿ ಸಾನ್ನಪ್ಪಿಪ್ಪಿದ್ದಾಳೆ ಎನ್ನಲಾಗಿದೆ. ವಿದ್ಯಾರ್ಥಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಉತ್ತರ ಪ್ರದೇಶದ ಮವು ನಿವಾಸಿಯಾಗಿರುವ 12 ನೇ ತರಗತಿ ವಿದ್ಯಾರ್ಥಿನಿ ಪ್ರಿಯಾಸ್ ಸಿಂಗ್ ಕೋಟಾದಲ್ಲಿನ ಕೋಚಿಂಗ್ ಸೆಂಟರ್ ನಲ್ಲಿ ನೀಟ್-ಯುಜಿಗೆ ತಯಾರಿ ನಡೆಸಿದ್ದರು. […]