ಭ್ರಷ್ಟಾಚಾರ; 11 ಅಧಿಕಾರಿಗಳು ಅಮಾನತು; ಬರೋಬ್ಬರಿ 250 ಕೋಟಿ ರೂ. ಗುಳುಂ ಮಾಡಿರುವ ಆರೋಪ!
ಅಭಿವೃದ್ದಿ ಕಾರ್ಯಕ್ರಮಗಳ ಅಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಸದೆ 250 ಕೋಟಿ ರೂ. ಮೊತ್ತದ ಬಿಲ್ ಪಾವತಿ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಆರ್ಆರ್ ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿವಿಸಿಸಿ ವಿಭಾಗದ ಮುಖ್ಯ ಇಂಜಿನಿಯರ್ ದೊಡ್ಡಯ್ಯ ಸೇರಿದಂತೆ 11 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ನೀಡಿದ ದೂರಿನ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಅವರಿಂದ 11 ಮಂದಿಯ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂದು […]