Crime News: ಪ್ರೀತಿಸಿದವಳ ಮೇಲೆ ಬಿಸಿ ಎಣ್ಣೆ ಎರಚಿದ ಕಿರಾತಕ!
ಪಾಪಿಯೊಬ್ಬ ತನ್ನ ಪ್ರೇಯಸಿಯ ಮೇಲೆಯೇ ಕುದಿಯುವ ಎಣ್ಣೆ ಎರಚಿರುವ ಘಟನೆ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆದಿದ್ದು, ಜವಾಹರ್ ಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆಯೇ ಕುದಿಯುವ ಎಣ್ಣೆ ಎರಚಲಾಗಿದೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಏಲೂರು ಜಿಲ್ಲೆಯ ತನ್ನ ಮನೆಯ ಕೊಠಡಿಯಲ್ಲಿ ಯುಕ ಆಕೆಯ ಕೈ ಮತ್ತು ಕಾಲುಗಳ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾನೆ. ಸಂತ್ರಸ್ತೆ ಭಾನುವಾರ ಬೆಳಿಗ್ಗೆ ತಪ್ಪಿಸಿಕೊಂಡು ಪೊಲೀಸರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. […]