Kornersite

Crime Just In Karnataka State

ಪೊಲೀಸರ ಹಲ್ಲೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ!?

ಶಿವಮೊಗ್ಗ: ವ್ಯಕ್ತಿಯೊಬ್ಬನ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಥಳಿಸಿದ್ದರು. ಇದೇ ಘಟನೆಯಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಮಾತು ಇದೀಗ ಕೇಳಿ ಬರುತ್ತಿದೆ. ಈ ಬಗ್ಗೆ ಯುವಕನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ. ಶಿವಮೊಗ್ಗದ ಹೊಳೆಹೊನ್ನುರು ಗ್ರಾಮದ ಮಂಜುನಾಥ್ ಎನ್ನುವವನು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಜುನಾಥ್ ಆತ್ಮಹತ್ಯೆಗೆ ಪೊಲೀಸರೇ ಕಾರಣ. ಪೊಲೀಸರು ಸಾರ್ವಜನಿಕ ಸ್ಥಳದಲ್ಲಿ ಥಳಿಸಿದ್ದನ್ನ ಮನ್ನಸಿನಲ್ಲಿ ಇಟ್ಟುಕೊಂಡು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಮ್ದು ಆತನ ಪತ್ನಿ ದೂರನ್ನ ನೀಡಿದ್ದಾಳೆ. ಏನಿದು […]

Crime National

ಖ್ಯಾತ ಮಿಮಿಕ್ರಿ ಕಲಾವಿದ ಅರೆಸ್ಟ್; ಏಕೆ ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲ ರಾಜಕಾರಣಿ, ಸೆಲೆಬ್ರಿಟಿಗಳನ್ನು ಮಿಮಿಕ್ರಿ ಮಾಡಿ ಪ್ರಸಿದ್ಧವಾಗಿದ್ದ ಅವಧೇಶ ದುಬೆ, ರೈಲಿನಲ್ಲಿ ಅಕ್ರಮವಾಗಿ ಉಡುಗೊರೆ ವಸ್ತುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ವಲ್ಸಾದ್ ನ ಪ್ರೊಟೆಕ್ಷನ್ ಪೋರ್ಸ್ ಪ್ರಕರಣ ದಾಖಲಿಸಿ, ಪರವಾನಿಗೆ ಮಾರಾಟ ಮಾಡಿದ್ದಕ್ಕೆ ಕೇಸ್ ದಾಖಲಿಸಲಾಗಿದೆ. ವಲ್ಸಾದ್ ರೈಲ್ವೆ ಅಧಿಕಾರಿಗಳ ಮಹಿತೆಯಂತೆ, ರೈಲಿನಲ್ಲಿ ಅಕ್ರಮವಾಗಿ ಉಡುಗೊರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ದುಬೆ ಅವರನ್ನು ಆಪಿಎಫ್ ಆಕ್ಟ್ ಸೆಕ್ಷನ್ 114ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಿಡುಗಡೆ ಮಾಡಲಾಗಿದೆ. 2019ರಲ್ಲಿ ಮೊಬೈಲ್ ರೈಲ್ವೇ […]

Crime Just In National

ಸಮುದ್ರದ ಆಳದಲ್ಲಿ 20 ಕೋಟಿ ರೂ. ಮೌಲ್ಯದ ಚಿನ್ನ ಪತ್ತೆ; ಅಧಿಕಾರಿಗಳೇ ಶಾಕ್!

ಸುಮುದ್ರದ ಆಳದಲ್ಲಿ 20 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನದ ಬಿಸ್ಕೇಟ್ ಕಂಡು ಬಂದಿರುವ ಘಟನೆ ತಮಿಳುನಾಡಿನ (Tamil Nadu) ರಾಮೇಶ್ವರಂನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಇದನ್ನು ಹೊರ ತೆಗೆಯುವಲ್ಲಿ ಅಧಿಕಾರಿಗಳು ಕೂಡ ಯಶಸ್ವಿಯಾಗಿದ್ದಾರೆ. ರಾಮೇಶ್ವರಂ ಮಂಟಪ ಪ್ರದೇಶದಿಂದ ಸಮುದ್ರ ಮಾರ್ಗವಾಗಿ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು. ಅಧಿಕಾರಿಗಳಿಗೆ ಅಪರಿಚಿತ ದೋಣಿ ಹೋಗುತ್ತಿರುವುದು ಕೂಡ ಗನಕ್ಕೆ ಬಂದಿತ್ತು. ಖಚಿತ ಮಾಹಿತಿ ಪಡೆದ ಭಾರತೀಯ ಕೋಸ್ಟ್ ಗಾರ್ಡ್ (India Coast Guard) ಮತ್ತು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (Revenue […]

Crime Just In National

Crime News: ಪ್ರೀತಿಸಲು ನಿರಾಕರಿಸಿದ ಯುವತಿಗೆ ಚಾಕು ಹಾಕಿದ ಪಾಪಿ!

ನವದೆಹಲಿ : ಪಾಗಲ್ ಪ್ರೇಮಿಯೊಬ್ಬ ಪ್ರೀತಿ ಒಪ್ಪಿಕೊಳ್ಳದ ಯುವತಿಗೆ ಚಾಕು ಇರಿದು, ನಂತರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯ ರೋಹಿಣಿ ಜಿಲ್ಲೆಯ ಬೇಗಂಪುರದಲ್ಲಿ ನಡೆದಿದೆ. ಅಲ್ಲಿಯ ಅಮಿತ್ ಎಂಬ ವ್ಯಕ್ತಿ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದ ಯುವತಿಗೆ ಚಾಕುವಿನಿಂದ ಇರಿದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಮಿತ್ ಪ್ರೀತಿಸುತ್ತಿದ್ದ ಯುವತಿ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈತ ಯುವತಿಗೆ ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ. ಆದರೆ ಇದಕ್ಕೆ ಯುವತಿ ಒಪ್ಪಿಕೊಳ್ಳದ ಕಾರಣ ಆಕೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ. ನಿನ್ನೆ […]

Bengaluru Crime Just In Karnataka State

ಮದುವೆಯಾಗುತ್ತೇನೆಂದು ವರನ ಬಳಿ ಹಣ ಪಡೆದು ಯಾಮಾರಿಸಿದ ವಧು ಕುಟುಂಬ?

ಆನೇಕಲ್: ವಧುದಕ್ಷಿಣೆ ಪಡೆದು ವಧು ನೀಡದೆ ವರನಿಗೆ ವಂಚಿಸಿರುವ ಆರೋಪವೊಂದು ಆನೇಕಲ್ (Anekal) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವರನ ಕುಟುಂಬಸ್ಥರು ಯುವತಿ ಹಾಗೂ ಕುಟುಂಬಸ್ಥರ ವಿರುದ್ಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2021ರಲ್ಲಿ ಜಿಗಣಿಯ ನಾರಾಯಣ‌ ನಾಯಕ್ ಎಂಬುವವರ ಜೊತೆ ರಾಯಚೂರು ಜಿಲ್ಲೆಯ ಸಿಂಧನೂರು‌‌ ತಾಲೂಕಿನ ಯುವತಿಯ ಮದುವೆ ಮಾತುಕತೆ ನಡೆದಿತ್ತು. ಆಗ ಯುವತಿಯ ಕಡೆಯವರು ನಮ್ಮ ಬಳಿ ಹಣ ಇಲ್ಲ, 2 ವರ್ಷಗಳ ನಂತರ ಮದುವೆ ಮಾಡುತ್ತೇವೆ ಎದು ಹೇಳಿ, 2 […]

Bengaluru Crime Just In Karnataka State

ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಎಡಿಜಿಪಿ ಬಿ.ದಯಾನಂದ್ ನೇಮಕ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಬಿ.ದಯಾನಂದ್ ಅವರನ್ನ ನೇಮಕ ಮಾಡಲಾಗಿದೆ. ಈವರೆಗೆ ಬೆಂಗಳೂರು ಕಮಿಷನರ್ ಆಗಿದ್ದ ಸಿಎಚ್ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಟ್ರಾಫಿಕ್ ವಿಶೇಷ ಆಯುಕ್ತ ಹಾಗೂ ಎಡಿಜಿಪಿ ಎಂ ಸಲೀಂ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Bengaluru Crime Just In Karnataka State

ರೈಲ್ವೆ ಸಿಬ್ಬಂದಿ, ಪೊಲೀಸರ ನಿರ್ಲಕ್ಷ್ಯದಿಂದ ರೈಲಿನಲ್ಲಿ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ!

ಮಂಡ್ಯ : ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನಲ್ಲಿ ಮೂರ್ಛೆ ರೋಗಿಯೊಬ್ಬರು ನರಳಿ ನರಳಿ ಪ್ರಾಣ ಬಿಟ್ಟ ಘಟನೆಯೊಂದು ರೈಲ್ವೆ ಸಿಬ್ಬಂದಿ ಹಾಗೂ ಪೊಲೀಸರ ನಿರ್ಲಕ್ಷ್ಯದಿಂದಾಗಿ ಮೈಸೂರು (Mysuru) ಹಾಗೂ ಮಂಡ್ಯ (Mandya) ನಡುವಿನ ರೈಲು (Train) ಪ್ರಯಾಣದಲ್ಲಿ ನಡೆದಿದೆ. ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ (83) ಸಾವನ್ನಪ್ಪಿದ ವ್ಯಕ್ತಿ. ಮೈಸೂರಿನಿಂದ ಬೆಂಗಳೂರಿಗೆ ಪ್ಯಾಸೆಂಜರ್ ರೈಲಿನಲ್ಲಿ ಸ್ವಾಮಿ ಪ್ರಯಾಣಿಸುತ್ತಿದ್ದರು. ಅವರು ರೈಲು ಹತ್ತುತ್ತಿದ್ದಂತೆ ಮೂರ್ಛೆ ಬಂದು ಕುಸಿದು ಬಿದ್ದಿದ್ದಾರೆ. ಸಹ ಪ್ರಯಾಣಿಕರು ಮೈಸೂರಿನಲ್ಲೆ ರೈಲ್ವೆ ಪೊಲೀಸರಿಗೆ, ಸಿಬ್ಬಂದಿಗೆ ಮಾಹಿತಿ […]

Crime Just In National

Crime News: ಗೆಳತಿ, ತಂದೆಗೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ!

ಪ್ರೇಮ ವಿಚಾರವಾಗಿ ಪೊಲೀಸ್ ಪೇದೆಯೊಬ್ಬ ತನ್ನ ಗೆಳತಿಯನನು ಗುಂಡು ಹಾರಿಸಿ ಕೊಲೆ ಮಾಡಿ ನಂತರ ಆಕೆಯ ತಂದೆಯನ್ನೂ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ. ಈತ ಮೊದಲು ಗೆಳತಿಗೆ ಗುಂಡು ಹಾರಿಸಿ, ಅವರ ತಂದೆ ಕೊಂದು, ಕೊನೆಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ಪೊಲೀಸ್ ಪೇದೆ 26 ವರ್ಷದ ಸುಭಾಷ್ ಖರಾಡಿ, ಬರ್ಚಾ ಪೊಲೀಸ್ ಠಾಣೆ ವ್ಯಾಪ್ತಿಯ ಮಲಿಖೇಡಿಯಲ್ಲಿ 55 ವರ್ಷ ವಯಸ್ಸಿನ ಜೈಕರ್ ಶೇಖ್ ಅವರ ನಿವಾಸಕ್ಕೆ […]

Bengaluru Crime Just In Karnataka State

ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಿಎಂ ಸಿದ್ದು

ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಕೆಡಬಾರದು. ನಾಲ್ಕು ವರ್ಷ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಏನೇನ್ ಮಾಡಿದೀರಾ ಅನ್ನೋದು ಗೊತ್ತಿದೆ. ಆ ತಪ್ಪು ರಿಪೀಟ್ ಮಾಡಬೇಡಿ. ಅಕ್ರಮ ಚಟುವಟಿಕೆಗಳ ವಿರುದ್ದ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು. ಈ ವೇಳೆ ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ದ ಕ್ರಮ ಗೈಗೊಳ್ಳಬೇಕು […]

Crime Just In State

ಹನಿಟ್ರ್ಯಾಪ್ ಮಾಡುವಂತೆ ಮಂಗಳಮುಖಿಯರಿಗೆ ಒತ್ತಾಯ; ಒಪ್ಪದ್ದಕ್ಕೆ ಹಲ್ಲೆ!

ಆರ್ಥಿಕವಾಗಿ ಸ್ಥಿತಿವಂತರನ್ನು ಹನಿಟ್ರ್ಯಾಪ್ ಗೆ ಕೆಡವಲು ಸಂಚು ರೂಸಿದ್ದ ಯುವಕರ ತಂಡವೊಂದು, ಇದಕ್ಕಾಗಿ ಮಂಗಳಮುಖಿಯರನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಇದಕ್ಕೆ ಮಂಗಳಮುಖಿಯರು ಒಪ್ಪದ ಹಿನ್ನೆಲೆಯಲ್ಲಿ ಅವರ ಮೇಲೆ ಯುವಕರ ತಂಡ ಹಲ್ಲೆ ನಡೆಸಿದೆ.ಈ ಘಟನೆ ಗಂಗಾವತಿಯಲ್ಲಿ ನಡೆದಿದೆ. ಯುವಕರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವವರನ್ನು ಗಾಂಧಿ ವೃತ್ತದ ನಿವಾಸಿಗಳಾದ ಅನುಶ್ರೀ, ರತ್ನಾ ಅಲಿಯಾಸ್ ರತಿ ಮತ್ತು ಸುಕನ್ಯಾ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಆಸ್ಪತ್ರೆ ವೈದ್ಯ […]