Job: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ!
ದೇಶದಲ್ಲಿನ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ 12,828 ಗ್ರಾಮೀಣ ಡಾಕ್ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು indiapostgdsonline.gov.in.ನಲ್ಲಿ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ 2023ರ ಮೇ 22ರಂದು ಆರಂಭವಾಗಿ ಜೂನ್ 11ರಂದು ಮುಕ್ತಾಯವಾಗುತ್ತದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಉಂಟಾಗುವ ದೋಷಗಳನ್ನು ತಿದ್ದುಪಡಿ ಮಾಡಲು ಜೂನ್ 12ರಿಂದ ಜೂನ್ 14ರ ವೆರೆಗೆ ಕಾಲಾವಕಾಶ ನೀಡಲಾಗಿದೆ.ಸರ್ಕಾರದಿಂದ […]