PUC Result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ಎಂದಿನಂತೆ ಬಾಲಕಿಯರೇ ಮೇಲುಗೈ!
Bangalore : ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ(Karnataka 2nd PUC Result 2023) ಫಲಿತಾಂಶ ಪ್ರಕಟವಾಗಿದ್ದು, ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ […]