ರಾಯಚೂರಿನಲ್ಲಿ ಮತ್ತೊಂದು ಕಲುಷಿತ ನೀರಿನ ಪ್ರಕರಣ ಬೆಳಕಿಗೆ; 20ಕ್ಕೂ ಅಧಿಕ ಜನರು ತೀವ್ರ ಅಸ್ವಸ್ಥ!
ರಾಯಚೂರು: ಇತ್ತೀಚಿಗಷ್ಟೇ ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು(Contaminated Water) ಸೇವಿಸಿ ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತುಗೊಂಡಿದ್ದರು. ಸದ್ಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಮತ್ತೊಂದು ಗ್ರಾಮದಲ್ಲಿ ಕಲುಷಿತ ನೀರು ಕುಡಿದು 20 ಕ್ಕು ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗೊರೆಬಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 20ಕ್ಕೂ ಅಧಿಕ ಜನರು […]