ಕರ್ನಾಟಕದ ಹಲವೆಡೆ ಪ್ರವಾಹ: ಕ್ಷೇಮವಾಗಿರು ಕರ್ನಾಟಕ!
ಮಹಾರಾಷ್ಟ್ರ ಪಶ್ಚಿಮಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕರ್ನಾಟಕದ ಹಲವೆಡೆ ಪ್ರವಾಹ ಉಂಟಾಗುತ್ತಿದೆ. ಕೃಷ್ಣಾ, ವೇದಗಂಗಾ, ದೂಧ್‌ಗಂಗಾ, ಹಿರಣ್ಯಕೇಶಿ, ಘಟಪ್ರಭಾ ನದಿಗಳ ನೀರಿನ ಮಟ್ಟ ಹೆಚ್ಚಾಗಿದ್ದು, ಆತಂಕ ಹೆಚ್ಚಾಗುತ್ತಿದೆ. ಕೃಷ್ಣಾ ನದಿಗೆ 92 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ದೂದ್‌ಗಂಗಾ ನದಿಗೆ 20 ಸಾವಿರ ಕ್ಯುಸೆಕ್‌ನಷ್ಟು ಒಳಹರಿವು ಹೆಚ್ಚಾಗಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 14 ಸೇತುವೆಗಳು ಮುಳುಗಡೆಯಾಗಿವೆ. ನದಿ ತೀರಕ್ಕೆ ಜನರು ಹೋಗದಂತೆ ಸದಲಗಾ ಪೊಲೀಸರು ಸದಲಗಾ ಪಟ್ಟಣದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ದೂಧ್‌ಗಂಗಾ ನದಿಗೆ ಅಡ್ಡಲಾಗಿ […]