Kornersite

Bengaluru Just In Karnataka State

ರಾಜ್ಯದ ಈ ಜಿಲ್ಲೆಗಳಲ್ಲಿ ಇರಲಿದೆ ಮಳೆಯ ಆರ್ಭಟ

ರಾಜ್ಯದಲ್ಲಿ ಎರಡು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದ.ಕನ್ನಡ, ಉಡುಪಿ, ಉ.ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಹಾಗೂ ಕೋಲಾರ ಜಿಲ್ಲೆ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳು ಕರಾವಳಿಯ ಬಹುತೇಕ ಕಡೆಗಳಲ್ಲಿ ಉತ್ತರ ಒಳನಾಡಿನ ಹಲವು ಕಡೆ ಮತ್ತು […]

Just In Karnataka State

ಸಂಕಷ್ಟದಲ್ಲಿ ರೈತರು; ಸರಳ ದಸರಾಕ್ಕೆ ಸರ್ಕಾರ ನಿರ್ಧಾರ!

ರಾಜ್ಯದಲ್ಲಿ ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ರೈತ ವಲಯ ಸಂಕಷ್ಟದಲ್ಲಿದೆ. ಹೀಗಾಗಿ ಪ್ರಸಕ್ತ ವರ್ಷ ಸರಳ ಹಾಗೂ ಅರ್ಥಪೂರ್ಣ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ಈ ಕುರಿತಾಗಿ ಟ್ವಿಟರ್‌ ಮೂಲಕ ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಮಳೆ ಕಡಿಮೆಯಾಗಿರುವುದರಿಂದಾಗಿ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಹಾಗೂ ಅರ್ಥಪೂರ್ಣ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಬರಸಿಡಿಲು […]

Bengaluru Just In Karnataka State

ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಕೆಲವೆಡೆ ಗುಡುಗು, ಸಿಡಿಲಿನ ಮಳೆ!

ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಗುಡು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. […]

Just In Karnataka State

ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ಕೆಲವು ದಿನಗಳಿಂದ ಕೈ ಕೊಟ್ಟಿದ್ದ ಮಳೆರಾಯ ಇಂದಿನಿಂದ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಒಳನಾಡಿನ ಪ್ರತ್ಯೇಕ ಭಾಗಗಳಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ, ತುಮಕೂರು, ರಾಮನಗರ, ಬೆಳಗಾವಿ, ಬಾಗಲಕೋಟೆ, ಬೀದರ್ ಮತ್ತು ಕೋಲಾರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ ತಿಂಗಳ ಮಳೆಯ ಅಂಕಿ ಅಂಶಗಳನ್ನು ಗಮನಿಸುವುದಾದರೆ ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಶೇ. 74ರಷ್ಟು ಮಳೆ ಕೊರತೆಯಾಗಿದೆ.

Just In Karnataka State

ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದ್ದರೂ ಬೈಕ್ ನೊಂದಿಗೆ ಹುಚ್ಚಾಟ!

ಬೆಳಗಾವಿ ಜಿಲ್ಲೆ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ವೇಳೆ ಗೋಕಾಕ್ – ಶಿಂಗಳಾಪೂರ ನಡುವಿನ ಅಪಾಯಕಾರಿ ಸೇತುವೆ ಮೇಲೆ ಬೈಕ್ (Bike) ಸವಾರನೊಬ್ಬ ಹುಚ್ಚಾಟ ಮೆರೆದಿರುವ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಗೋಕಾಕ್ ತಾಲೂಕಿನ ಘಟಪ್ರಭಾ ನದಿಯಲ್ಲಿ (Ghataprabha River) ನೀರಿನ ಪ್ರಮಾಣ ಹೆಚ್ಚಳವಾಗಿದೆ. ಪರಿಣಾಮ ಸೇತುವೆ ಜಲಾವೃತಗೊಂಡಿದ್ದು, ಅಪಾಯಕಾರಿ ಸೇತುವೆಯ ಮೇಲೆ ಬೈಕ್ ಸವಾರ ದುಸ್ಸಾಹಸ ಮೆರೆದಿದ್ದಾನೆ. ಸೇತುವೆ ಮೇಲೆ ತೆರಳದಂತೆ ಕರ್ತವ್ಯ ನಿರತ […]

Bengaluru Just In Karnataka State

ಮುಂಗಾರು ಮಳೆ ಪ್ರವೇಶ ವಿಳಂಬ: ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ

ರಾಜ್ಯದಲ್ಲಿ ಮುಂಗಾರು (Monsoon) ಪ್ರವೇಶ ವಿಳಂಬವಾದ ಕಾರಣ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಕೆಲವು ಕಡೆ ಕಡಿಮೆ ಮಳೆಯಾದ್ರೆ, ಮತ್ತೆ ಕೆಲವು ಕಡೆ ಮಳೆಯ ಸುಳಿವೇ ಇಲ್ಲದಂತಾಗಿದೆ. ಕಾರಣ ಡ್ಯಾಂಗಳು ಖಾಲಿ ಖಾಲಿಯಾಗಿವೆ. ರಾಜ್ಯಕ್ಕೆ ನೀರಿನ ಕೊರತೆ ಉಂಟಾಗಿದೆ. ಹೀಗೆ ಆದರೆ ಬೆಂಗಳೂರಿಗೆ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ದಿನದಿಂದ ದಿನಕ್ಕೆ ಕೆಆರ್ ಎಸ್ ನೀರಿನ ಮಟ್ಟ ಇಳಿಯುತ್ತಿದೆ. ಜೂನ್ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಆಗಲಿಲ್ಲ. ಜುಲೈ ತಿಂಗಳಲ್ಲಿ ಆರಂಭವಾಗಿದೆ ಆದ್ರೆ ಅಷ್ಟೊಂದು ಚುರುಕಾಗಿಲ್ಲ. ರಾಜ್ಯಕ್ಕೆ […]

Bengaluru Just In Karnataka State

ರಾಜ್ಯದಲ್ಲಿ ಭಾರೀ ಮುಂಗಾರು ಕೊರತೆ; ಶೇ. 72ರಷ್ಟು ಕೊರತೆ! ಆಕಾಶದತ್ತ ಮುಖ ಮಾಡಿದ ರೈತರು!

ರಾಜ್ಯದಲ್ಲಿ ಮುಂಗಾರು ಆರಂಭದ ಮೊದಲ ವಾರವೇ ಕೊರತೆಯಾಗಿದ್ದು, ರೈತರು ಆತಂಕ ಪಡುವಂತಾಗಿದೆ. ಈ ಅವಧಿಯಲ್ಲಿ ರಾಜ್ಯದಲ್ಲ ಶೇ. 72ರಷ್ಟು ಮಳೆ ಕೊರತೆಯಾಗಿದ್ದು, ಇದು ಕಳೆದ 28 ವರ್ಷದಲ್ಲಿ ಎದುರಾದ ಅತಿ ಹೆಚ್ಚಿನ ಮಳೆ ಕೊರತೆಯಾಗಿದೆ. ವಾಡಿಕೆಯಂದೆ ಜೂನ್‌ 1ರಿಂದ 10ರೊಳಗೆ ರಾಜ್ಯದಲ್ಲಿ ಸರಾಸರಿ 51.20 ಮಿ.ಮೀ ಮಳೆಯಾಗಬೇಕು. ಆದರೆ, ಈ ಬಾರಿ ಕೇವಲ 14 ಮಿ.ಮೀ ಮಾತ್ರ ಮಳೆಯಾಗಿದೆ. ಇದು ವಾಡಿಕೆ ಪ್ರಮಾಣಕ್ಕಿಂತ ಶೇ.72ರಷ್ಟುಕಡಿಮೆ ಮಳೆಯಾಗಿದೆ. 1995ರಲ್ಲಿ ಮೊದಲ ವಾರದಲ್ಲಿ ಶೇ.74ರಷ್ಟುಮಳೆ ಕೊರತೆ ಉಂಟಾಗಿತ್ತು. ಆನಂತರ 28 […]

Bengaluru Just In Karnataka State

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭರ್ಜರಿ ಮಳೆಯ ಸಾಧ್ಯತೆ!

ರಾಜ್ಯದ ಹಲವ ಜಿಲ್ಲೆಗಳಲ್ಲಿ ಜೂನ್ 20ರ ವರೆಗೆ ಭರ್ಜರಿ ಮಲೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಬಿಪೋರ್ಜಾಯ್ […]

Bengaluru Just In Karnataka State

Rain Update: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 19ರ ವರೆಗೆ ಮಳೆರಾಯನ ಸಿಂಚನ!

ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರೈತರು ಸಂತಸ ಪಡುವ ಸಂಗತಿಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಜೂನ್ 19ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ […]

Bengaluru Just In Karnataka State

Rain Update: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶುರುವಾದ ಮಳೆರಾಯನ ಆರ್ಭಟ; ರೈತರಲ್ಲಿ ಹರ್ಷ!

ಉಡುಪಿ : ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಪ್ರವೇಶ ಮಾಡಿರುವ ಲಕ್ಷಣಗಳು ಗೋಚರಿಸಿದ್ದು, ಉಡುಪಿ (Udupi Rain) ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಜಿಲ್ಲೆಯ ಕುಂದಾಪುರ, ಬೈಂದೂರು, ಉಡುಪಿ ತಾಲೂಕಿನ ಹಲವು ಪ್ರದೇಶಗಳಲ್ಲಿ ಭರ್ಜರಿ ಮಳೆಯಾಗಿದೆ. ಈಗಾಗಲೇ ಹವಾಮಾನ ಇಲಾಖೆ (Weather Department)ಯು ಮಳೆ ಮುನ್ಸೂಚನೆ ನೀಡಿದೆ. ರಾತ್ರಿ ಗುಡುಗು ಸಹಿತ ಸುಮಾರು ಅರ್ಧ ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. ವ್ಯಾಪಕ ಬಿಸಿಲಿನಿಂದ ಕೂಡಿದ್ದ ವಾತಾವರಣ ಈಗ ತಂಪಾಗಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ 35 ಮಿಲಿ ಮೀಟರ್ ನಷ್ಟು ಮಳೆ […]