Kornersite

Bengaluru Just In Karnataka State

Karnataka Rain: ರಾಜ್ಯದಲ್ಲಿ ಮಳೆಯಿಂದಾಗಿ ಇಲ್ಲಿಯವರೆಗೆ 52 ಜನ ಬಲಿ; ಅಪಾರ ಆಸ್ತಿ ಹಾನಿ!

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಿಂದಾಗಿ ಇಲ್ಲಿಯವರೆಗೆ 52 ಜನ ಸಾವನ್ನಪ್ಪಿದ್ದು, ಸಾಕಷ್ಟು ಪ್ರಮಾಣದಲ್ಲಿ ಆಸ್ತಿ ಪಾಸ್ತಿ, ಬೆಳೆ ಹಾನಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೇ, ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಕರ್ತವ್ಯ ಲೋಪವೆಸಗಿದರೆ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ವಿಪತ್ತು ನಿರ್ವಹಣೆ ಕುರಿತು ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ […]

Bengaluru Just In Karnataka State

Rain Update: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯ ಆರ್ಭಟ; ಯಾವ ಯಾವ ಜಿಲ್ಲೆಯಲ್ಲಿ ಆಗಲಿದೆ ಮಳೆ!

ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವು (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆ ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಹಲವು ಜಿಲ್ಲೆಗಳಲ್ಲಿ ನಿನ್ನೆ ಕೂಡ ಭರ್ಜರಿ ಮಳೆಯಾಗಿದೆ. ವಿಜಯಪುರದಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. […]

Bengaluru Just In Karnataka State

ಚಿನ್ನಾಭರಣದ ಮಳಿಗೆಗೆ ನುಗ್ಗಿದ ನೀರು; ನೀರಲ್ಲಿ ಲೀನವಾದ ಚಿನ್ನಾಭರಣ!

ಬೆಂಗಳೂರಿನಲ್ಲಿ ನಿನ್ನೆ ಭರ್ಜರಿ ಮಳೆ ಸುರಿದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಸಾಕಷ್ಟು ಅವಾಂತರಗಳು ನಡೆದಿವೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಸಾಕಷ್ಟು ಹಾನಿ ಸಂಭವಿಸುವಂತಾಗಿದೆ. ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿಯಾಗಿದ್ದು, ಮಳೆಯ ನೀರು ಅಂಗಡಿಗೆ ನುಗ್ಗಿ ಸುಮಾರು ಎರಡುವರೆ ಕೋಟಿ ರೂ. ನಷ್ಟವಾಗಿದೆ. ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ […]

Bengaluru Just In Karnataka State

ಸಿಲಿಕಾನ್ ಸಿಟಿಯಲ್ಲಿ ವರುಣಾರ್ಭಟಕ್ಕೆ ಮಹಿಳೆ ಬಲಿ; ಪರಿಹಾರ ಘೋಷಿಸಿದ ಸಿಎಂ!

Bangalore : ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಆಗಮಿಸಿದ್ದ ಮಹಿಳೆ ಮಳೆಗೆ ಸಿಲುಕಿ ಸಾವನ್ನಪ್ಪಿದ್ದು, ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ, ಪರಿಹಾರ ಘೋಷಣೆ ಮಾಡಿದ ಅವರು, ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಈಗಷ್ಟೇ ಅಧಿಕಾರಕ್ಕೆ ಬಂದಿದೆ. ನಗರದಲ್ಲಿ ಕೆಲವು ಅವೈಜ್ಞಾನಿಕ ಅಂಡರ್ ಪಾಸ್‌ಗಳಿವೆ. ಅದನ್ನ ಸರಿಪಡಿಸುವ […]

Bengaluru Just In Karnataka State

Rain Update: ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆ ಇದೆಯೇ?

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರನಲ್ಲಿ ಮೋಡ ಕವಿದ ವಾತವರಣ ಇದ್ದು, ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಒಣಹವೆ ಕಂಡು ಬಂದರೆ,ನಂತರ ಎರಡು ದಿನಗಳ ಕಾಲ […]

Rain Update: ಹಲವು ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ! ಕರ್ನಾಟಕದಲ್ಲಿ ಎಲ್ಲೆಲ್ಲಿ ಸಾಧ್ಯತೆ!

ನವದೆಹಲಿ : ಬಂಗಾಳಕೊಲ್ಲಿಯಲ್ಲಿ (Bay of Bengal) ಸೃಷ್ಟಿಯಾಗಿರುವ ಮೋಚಾ ಚಂಡಮಾರುತ (Cyclone Mocha) ತೀವ್ರ ಸ್ವರೂಪ ತಾಳಿದ್ದು, ಪೋರ್ಟ್‌ ಬ್ಲೇರ್‌ ನಿಂದ 520 ಕಿ.ಮೀ ದೂರದ ಆಗ್ನೇಯ ದಿಕ್ಕಿನಲ್ಲಿ ಚಲಿಸುತ್ತಿದೆ. ಮೋಚಾ ಚಂಡಮಾರುತ ಜನತೆಯನ್ನು ಭೀತಿಗೆ ತಳ್ಳಿದೆ. ಇದು ಕರಾವಳಿ ಭಾಗದಲ್ಲಿ ಇದರ ಪರಿಣಾಮ ಬೀರಲಿರುವ ಹಿನ್ನೆಲೆಯಲ್ಲಿ ಬಂಗಾಳ (West Bengal) ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ತ್ರಿಪುರಾ, ಮಿಜೋರಾಂ ಮತ್ತು ಬಂಗಾಳದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ […]

Bengaluru Just In Karnataka State

Rain Update: ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಭರ್ಜರಿ ಮಳೆಯ ಮುನ್ಸೂಚನೆ!

ರಾಜ್ಯದ ಹಲವು ಪ್ರದೇಶಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ಹೊತ್ತು ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ರೂಪುಗೊಂಡ ಸೈಕ್ಲೋನ್ ಮೋಕಾ […]

Bengaluru Just In Karnataka State

Rain Effect: ಎಚ್ಚರ-ಎಚ್ಚರ: ರಾಜ್ಯದಲ್ಲಿ ಮುಂದಿನ 4 ದಿನ ಮಳೆ

ರಾಜ್ಯದಲ್ಲಿ ಹಲವೆಡೆ ಮಳೆ ಸುರಿಯುತ್ತಲೇ ಇದೆ. ಈ ಮಳೆ ಇನ್ನು ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ. ನಿನ್ನೆ ರಾಜ್ಯದ ಹಲವೆಡೆ ಹಗುರವಾದ ಮಳೆ ಸುರಿದಿದೆ. ಬೆಂಗಳೂರು, ಮೈಸೂರು ಭಾಗದಲ್ಲಿ ಕೆಲ ಕಡೆ ಮಳೆಯಾಗಿದೆ. ಇನ್ನು ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಈ ಭಾಗದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೂಡ ನೀಡಿದೆ. ಅಷ್ಟೇ ಅಲ್ಲ ಉತ್ತರ ಕರ್ನಾಟಕ ಭಾಗದ ಬಹುತೇಕ ಕಡೆಗೆ ಮೇ 10 ರವರೆಗೆ ಗುಡುಗು, […]

Just In Sports

IPL 2023: ಚೆನ್ನೈ ಗೆಲುವು ಕಸಿದುಕೊಂಡ ಮಳೆರಾಯ!

ಲಕ್ನೋ : ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ ಜಯದ ವಿಶ್ವಾಸದಲ್ಲಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings)ಗೆ ದೊಡ್ಡ ನಿರಾಸೆ ಉಂಟಾಗಿದೆ. ಮಳೆಯಿಂದಾಗಿ (Rain) ಪಂದ್ಯ ರದ್ದಾದ ಕಾರಣ ಇತ್ತಂಡಗಳು ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಉಳಿದುಕೊಂಡಿವೆ. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಮತ್ತೊಮ್ಮೆ ಕಳಪೆ ಪ್ರದರ್ಶನ ಮುಂದುವರೆಸಿದರು. ಹೀಗಾಗಿ ಚೈನ್ನೈ ಎದುರು ಅಲ್ಪ ಮೊತ್ತಕ್ಕೆ ತಂಡ […]

Bengaluru Crime Just In Karnataka State

Crime News: ಮನೆ ಕುಸಿತ; ವೃದ್ಧೆ, 20 ದಿನಗಳ ಹಸುಗೂಸು ಸಾವು!

Koppal : ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಹಲವೆಡೆ ಜನ- ಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯ ಅವಾಂತರಕ್ಕೆ ಜಿಲ್ಲೆಯ ಕನಕಗಿರಿ (Kanakagiri) ತಾಲೂಕಿನ‌ ಜೀರಾಳದಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸೇರಿದಂತೆ 20 ದಿನಗಳ ಹಸುಗೂಸು ಸಾವನ್ನಪ್ಪಿದ್ದಾರೆ. ಫಕೀರಮ್ಮ(60), 20 ದಿನದ ಹೆಣ್ಣು ಮಗು ಸಾವನ್ನಪ್ಪಿದ ದುರ್ದೈವಿಗಳು. ಘಟನೆಯಲ್ಲಿ ಬಾಣಾಂತಿ ಕನಕಮ್ಮಳಿಗೆ ಗಾಯಗಳಾಗಿದ್ದು ಅವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ, ಘಟನೆಯಲ್ಲಿ ಕನಕಮ್ಮಳ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎರಡೂ ದಿನಗಳ […]