Karnataka Rain: ರಾಜ್ಯದಲ್ಲಿ ಮಳೆಯಿಂದಾಗಿ ಇಲ್ಲಿಯವರೆಗೆ 52 ಜನ ಬಲಿ; ಅಪಾರ ಆಸ್ತಿ ಹಾನಿ!
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಿಂದಾಗಿ ಇಲ್ಲಿಯವರೆಗೆ 52 ಜನ ಸಾವನ್ನಪ್ಪಿದ್ದು, ಸಾಕಷ್ಟು ಪ್ರಮಾಣದಲ್ಲಿ ಆಸ್ತಿ ಪಾಸ್ತಿ, ಬೆಳೆ ಹಾನಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೇ, ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಕರ್ತವ್ಯ ಲೋಪವೆಸಗಿದರೆ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ವಿಪತ್ತು ನಿರ್ವಹಣೆ ಕುರಿತು ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ […]