IPL 2023: ರಾಜಸ್ಥಾನ್ ರಾಯಲ್ಸ್ ಎದುರು RCBಗೆ ರೋಚಕ ಜಯ-ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ RCB
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ಎದುರು ರೋಚಕ ಜಯ ಗಳಿಸಿದೆ. ವಿರಾಟ್ ಕೋಹ್ಲಿ ನೇತೃತ್ವದಲ್ಲಿ ಆರ್ ಸಿಬಿ ತಂಡ ಎರಡು ಬಾರಿ ಗೆಲುವು ಸಾಧಿಸುವ ಮೂಲಕ್ ಅಂಕಪಟ್ಟಿಯಲ್ಲಿ 5ನೇ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ190 ರನ್ ಗಳ ಸವಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ ಖಾತೆ ತೆರೆಯುವ ಮುನ್ನವೇ ಸಿರಾಜ್ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆದರು. […]