Satish Jarakiholi: ಸರಳ ಜೀವಿ, ಮೌಢ್ಯದ ವಿರುದ್ಧ ಸದಾ ಹೋರಾಡುವ ಜಾರಕಿಹೊಳಿಗೆ ಸಚಿವ ಸ್ಥಾನ!
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಬರೋಬ್ಬರಿ 5ನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಸದಾ ಮೌಢ್ಯತೆ ವಿರುದ್ಧ ಸಮರವನ್ನು ಮಾನವ ಬಂಧುತ್ವ ವೇದಿಕೆಯ ಮೂಲಕ ರಾಜ್ಯಾದ್ಯಂತ ಮೂಢನಂಬಿಕೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಅಪರೂಪದ ರಾಜಕಾರಣಿ. ಸಿದ್ದರಾಮಯ್ಯ ಕಟ್ಟಾ ಶಿಷ್ಯ ಎಂದೇ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ರಾಜಕೀಯ ಜೀವನವೇ ವಿಭಿನ್ನ. 1992ರ ಗೋಕಾಕ್ ನಗರಸಭೆ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣೆಗೆ ನಿಲ್ಲಿಸಿ ಗೆಲುವ ಸಾಧಿಸಿದ ವ್ಯಕ್ತಿ. ಆ ಮೂಲಕವೇ ಅವರು […]