ದಾಖಲೆಯ ಸ್ಕ್ರೀನ್ ಗಳಲ್ಲಿ ಅಪ್ಪಳಿಸಲು ಸಿದ್ಧವಾಗಿರುವ ಆದಿಪುರುಷ್; ಐದು ಭಾಷೆಗಳಲ್ಲಿ ಬಿಡುಗಡೆಗೆ ಸಿದ್ಧತೆ!
ಪ್ರಭಾಸ್ (Prabhas) ನಟನೆಯ ಆದಿಪುರುಷ್ (Adipurush) ಸಿನಿಮಾ ದೇಶಾದ್ಯಂತ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ದೇಶದ ಅತಿದೊಡ್ಡ ಬಜೆಟ್ ಸಿನಿಮಾ ಇದಾಗಿದ್ದು, ಈಗ ತೆರೆಗೆ ಬರಲು ಸಜ್ಜಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಆದಿಪುರುಷ್ ಬಿಡುಗಡೆ ಆಗಲಿದ್ದು, ಭಾರತ (India) ಮಾತ್ರ ಅಲ್ಲದೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಏಕಕಾಲಕ್ಕೆ ತೆರೆಗೆ ಅಪ್ಪಳಿಸಲಿದೆ. ಜೂನ್ 16ರಂದು ಈ ಚಿತ್ರ ತೆರೆಗೆ ಅಪ್ಪಳಿಸಲಿದೆ. ಆದಿಪುರುಷ್ ಸಿನಿಮಾ ಮೊದಲ ದಿನವೇ ಸುಮಾರು 6200 ಸ್ಕ್ರೀನ್ ಗಳಲ್ಲಿ ತೆರೆ ಕಾಣಲಿದೆ ಎನ್ನಲಾಗುತ್ತಿದೆ. […]
