Kornersite

Crime Just In Karnataka State

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ! ಐವರಿಗೆ ಚಾಕು ಇರಿತ!

ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಹತ್ತಿರ ಕಳೆದ ರಾತ್ರಿ ನಡೆದಿದೆ. ಘಟನೆಯಲ್ಲಿ ಐವರಿಗೆ ಚಾಕು ಇರಿಯಲಾಗಿದ್ದು, ಆ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪವನ್ ಹಾಗೂ ಕಿರಣ್ ಸ್ನೇಹಿತರಾಗಿದ್ದು, ಇವರ ಗುಂಪುಗಳ ಮಧ್ಯೆಯೇ ಸಂಘರ್ಷ ನಡೆದಿದೆ. ಕಳೆದ ಕೆಲವು ವರ್ಷಗಳಿಂದ ಈ ಗುಂಪುಗಳ ಮಧ್ಯೆ ಸಣ್ಮಪುಟ್ಟ ಗಲಾಟೆ ನಡೆಯುತ್ತಿತ್ತು. ಅಲ್ಲದೇ, ಕಳೆದ ರಾತ್ರಿ ನೇತಾಜಿ ಸರ್ಕಲ್ ನಲ್ಲಿ ಇಬ್ಬರ ಮಧ್ಯೆ […]

Just In Karnataka Lifestyle State Travel

ಶಿವಮೊಗ್ಗಕ್ಕೆ ಹಾರಿದ ಮೊದಲ ವಿಮಾನ; ಮಾಜಿ ಸಿಎಂ ಯಡಿಯೂರಪ್ಪ ಸಂತಸ!

ಶಿವಮೊಗ್ಗ ಜಿಲ್ಲೆಗೆ ವಿಮಾನ ಸೇವೆ ಆರಂಭವಾಗಿದೆ. ಇಂದು ಮೊದಲ ವಿಮಾನ ತೆರಳಿದ್ದು, ಇಂಡಿಗೋ ವಿಮಾನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ (BS Yediyurappa), ಸಚಿವ ಎಂಬಿ ಪಾಟೀಲ್ (MB Patil) ಜೊತೆ ಆ ಭಾಗದ ಜನ ಪ್ರತಿನಿಧಿಗಳು ಪ್ರಯಾಣಿಸಿದ್ದರುಶಿವಮೊಗ್ಗದಲ್ಲಿ ಇಳಿದ ಮೊದಲ ವಿಮಾನಕ್ಕೆ ವಾಟರ್ ಸೆಲ್ಯೂಟ್ ಮೂಲಕ ಸ್ವಾಗತಿಸಲಾಯಿತು. ಗಣ್ಯರನ್ನು ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಸ್ವಾಗತಿಸಿದರು. ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರೈತರು […]

Crime Just In State

ಲೈಂಗಿಕ ಕಿರುಕುಳ: ಚರ್ಚ್‌ ಫಾದರ್‌ ನ್ಯಾಯಾಂಗ ಬಂಧನ

ಶಿವಮೊಗ್ಗ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕಾಲೇಜು ಪ್ರಿನ್ಸಿಪಾಲರನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫ್ರಾನ್ಸಿಸ್ ಫರ್ನಾಂಡಿಸ್ ಬಂಧಿತ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್. ಇವರು ಚರ್ಚ್ ನ ಫಾದರ್ ಕೂಡ ಆಗಿದ್ದಾರೆ. ಸದ್ಯ ಇವರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಸೆಕ್ರೆಡ್ ಹಾರ್ಟ್ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರಿಗೆ ಇವರು ಪ್ರೀತಿಸುವ ನಾಟಕವಾಡಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆ ವಸತಿ ನಿಲಯದಲ್ಲಿದ್ದರು. ಫರ್ನಾಂಡಿಸ್ ಕಿರುಕುಳದಿಂದ ವಿದ್ಯಾರ್ಥಿನಿ […]

Crime Just In State

ಮನೆಯಿಂದ ಹೊರಗೆ ಬಂದಿದ್ದ ರೌಡಿಶೀಟರ್ ಹತ್ಯೆ!

ಶಿವಮೊಗ್ಗ: ಮಧ್ಯರಾತ್ರಿ ಸಂದರ್ಭದಲ್ಲಿ ರೌಡಿಶೀಟರ್ ಒಬ್ಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ಭದ್ರಾವತಿ(Bhadravati) ಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ರೌಡಿಶೀಟರ್ ಮುಜಾಯಿದ್ದೀನ್(32) ಕೊಲೆಯಾಗಿರುವ ವ್ಯಕ್ತಿ. ಜುಲೈ 20ರಂದು ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಈ ಘಟನೆ ನಡೆದಿದೆ. ಮೃತ ರೌಡಿಶೀಟರ್ ಮನೆಯಿಂದ ಹೊರಗೆ ಬಂದಿದ್ದ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಸ್ಥಳಕ್ಕೆ ಪೇಪರ್ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದು, ಕೃತ್ಯಕ್ಕೆ […]

Crime Just In Karnataka State

ಪೊಲೀಸರ ಹಲ್ಲೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ!?

ಶಿವಮೊಗ್ಗ: ವ್ಯಕ್ತಿಯೊಬ್ಬನ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಥಳಿಸಿದ್ದರು. ಇದೇ ಘಟನೆಯಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಮಾತು ಇದೀಗ ಕೇಳಿ ಬರುತ್ತಿದೆ. ಈ ಬಗ್ಗೆ ಯುವಕನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ. ಶಿವಮೊಗ್ಗದ ಹೊಳೆಹೊನ್ನುರು ಗ್ರಾಮದ ಮಂಜುನಾಥ್ ಎನ್ನುವವನು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಜುನಾಥ್ ಆತ್ಮಹತ್ಯೆಗೆ ಪೊಲೀಸರೇ ಕಾರಣ. ಪೊಲೀಸರು ಸಾರ್ವಜನಿಕ ಸ್ಥಳದಲ್ಲಿ ಥಳಿಸಿದ್ದನ್ನ ಮನ್ನಸಿನಲ್ಲಿ ಇಟ್ಟುಕೊಂಡು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಮ್ದು ಆತನ ಪತ್ನಿ ದೂರನ್ನ ನೀಡಿದ್ದಾಳೆ. ಏನಿದು […]

Bengaluru Just In Karnataka State

Karnataka Rain: ರಾಜ್ಯದಲ್ಲಿ ಮಳೆ ತಂದ ಅವಾಂತರ; ಮುಂಗಾರು ಪೂರ್ವ ಮಳೆಗೆ ಇಬ್ಬರು ಬಲಿ!

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಆರಂಭಕ್ಕೂ ಮುನ್ನವೇ ವರುಣ (Rain in Karnataka)ನ ಅವಾಂತರ ಹೆಚ್ಚಾಗುತ್ತಿದೆ. ಪರಿಣಾಮ ಮಳೆಗಾಲದ ಪೂರ್ವದಲ್ಲಿಯೇ ಜನ- ಜೀವನ ಅಸ್ತವ್ಯಸ್ಥವಾಗಿದೆ. ಹಲವಾರು ಪ್ರದೇಶಗಳಲ್ಲಿ ಸಾವು- ನೋವು ಉಂಟಾಗಿವೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಹಲೆವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಸಂಜೆ ಮಳೆ ಗಾಳಿಗೆ ಸಾಕಷ್ಟು ತೊಂದರೆಗಳು ಸೃಷ್ಟಿಯಾಗಿವೆ. ಪಟ್ಟಣದ ವಿನೋಬ ನಗರದ ಆಶ್ರಯ ಬಡಾವಣೆ ನಿವಾಸಿ […]

Bengaluru Just In Karnataka Politics State

BY Vijayendra: ನಮ್ಮ ಕುಟುಂಬಕ್ಕೆ ಹೊಂದಾಣಿಕೆ ಮಾಡಿಕೊಳ್ಳುವ ಸ್ಥಿತಿ ಬಂದಿಲ್ಲ!

Shivamogga : ನಮ್ಮ ಕುಟುಂಬಕ್ಕೆ ಹೊಂದಾಣಿಕೆ ಮಾಡಿಕೊಳ್ಳುವ ಸ್ಥಿತಿ ಬಂದಿಲ್ಲ ಎಂದು ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ. ಶಿವಮೊಗ್ಗ (Shivamogga) ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, 2004ರ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ಎಂಬುವುದು ಗೊತ್ತಿರಲಿಲ್ಲ. ಅಂತಹ ಸಂದರ್ಭದಲ್ಲಿ ಶಿಕಾರಿಪುರದ (Shikaripura) ಮತದಾರರು ಸುಮಾರು 46 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಯಡಿಯೂರಪ್ಪ ಅವರನ್ನು ಗೆಲ್ಲಿಸಿದರು. ನಾನು ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಉಪಚುನಾವಣೆ ನಡೆದ […]

Bengaluru Just In Karnataka Politics State

Karnataka Assembly Election: ಈಶ್ವರಪ್ಪಗೆ ಶಾಕ್ ಕೊಟ್ಟ ಬಿಜೆಪಿ; ಉಳಿದಿದ್ದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ!

Bangalore : ವಿಧಾನಸಭಾ ಚುನಾವಣೆಗೆ ಬಿಜೆಪಿ (BJP) ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗ (Shivamogga) ಕ್ಷೇತ್ರಕ್ಕೆ ಚನ್ನಬಸಪ್ಪ ಹಾಗೂ ಮಾನ್ವಿ ಕ್ಷೇತ್ರಕ್ಕೆ ಬಿ.ವಿ. ನಾಯಕ್‌ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್‌ ಚನ್ನಬಸಪ್ಪಗೆ ಬಿಜೆಪಿ ಈ ಬಾರಿ ಟಿಕೆಟ್ ಘೋಷಣೆ ಮಾಡಿದೆ. ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದು, ಪುತ್ರನಿಗೆ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೆ, ಈಗ ಈಶ್ವರಪ್ಪಗೆ (Eshwarappa) ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಈಶ್ವರಪ್ಪ […]

Bengaluru Just In Karnataka Politics State

Karnataka Assemby Election: ಬಿಜೆಪಿಯ ಮತ್ತೊಂದು ವಿಕೆಟ್ ಪತನ!

Shivamogga : ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಬಿರುಸುಗೊಂಡಿದ್ದು, ಎಲ್ಲ ಪಕ್ಷಗಳಲ್ಲಿಯೂ ಟಿಕೆಟ್ ಹಂಚಿಕೆ ಕುರಿತು ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿಯಲ್ಲಿಯಂತೂ ಈ ತಲೆನೋವು ಹೆಚ್ಚಾಗುತ್ತಿದೆ. ಟಿಕೆಟ್ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಪಕ್ಷದ ಬಾಗಿಲು ಮುಚ್ಚುತ್ತಿದ್ದಾರೆ. ಸದ್ಯ ಈ ಸಾಲಿಗೆ ಶಿವಮೊಗ್ಗದ(Shivamogga) ಆಯನೂರು ಮಂಜುನಾಥ್(Ayanur Manjunath) ಸೇರಿದ್ದಾರೆ. ಅವರು ವಿಧಾನಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, […]