ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಶೋಭಾ!
ಜನರಿಗೆ ಸಿದ್ದರಾಮಯ್ಯ ಸರ್ಕಾರ ಅಂದರೆ ಯಡವಟ್ಟು ಸರ್ಕಾರ ಎನಿಸುತ್ತಿದೆ. ಯಾವ ಆಧಾರದಲ್ಲಿ ಎಲೆಕ್ಷನ್ ಗೆದ್ದಿದ್ದಾರೋ ಅದಕ್ಕೆ ಉಲ್ಟಾ ಆಗಿ ಅಧಿಕಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರ ಬಂದು ನಾಲ್ಕೈದು ತಿಂಗಳು ಕಳೆದಿದೆ. ಅಷ್ಟರಲ್ಲಿಯೇ ಯಡವಟ್ಟು ಮಾಡಿಕೊಂಡಿದೆ. ಈ ರಾಜ್ಯ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ಸ್ವಜನ ಪಕ್ಷಪಾತದ ಉತ್ತುಂಗಕ್ಕೆ ಏರಿದೆ. ಕಾವೇರಿ ನೀರಿನ ವಿಚಾರದಲ್ಲಿ ಪೂರ್ತಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾವೇರಿ ಪ್ರಾಧಿಕಾರ ಹಾಗೂ […]