Crime Story: ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವು!
ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರಿನ ಬೆಳಗುಂಬಾದ ಸಿದ್ದರಾಮೇಶ್ವರ ಬಡಾವಣೆಯಲ್ಲಿ ನಡೆದಿದೆ. ಪ್ರಜ್ವಲ್ (14) ಹಾಗೂ ಯತೀಶ್ (14) ಸಾವನ್ನಪ್ಪಿದ ಮಕ್ಕಳು ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮಕ್ಕಳು 8ನೇ ತರಗತಿಯಲ್ಲಿ ಓದುತ್ತಿದ್ದರು. ಮೃತ ಯತೀಶ್, ವೀರಭದ್ರಯ್ಯ ಎಂಬುವವರ ಮಗನಾಗಿದ್ದು, ಪ್ರಜ್ವಲ್ ಪಕ್ಕದ ಮನೆಯ ಸಿದ್ದಲಿಂಗಯ್ಯ ಎಂಬುವರ ಮಗನಾಗಿದ್ದಾನೆ. ಇಬ್ಬರು ಅಕ್ಕಪಕ್ಕದ ಮನೆ ನಿವಾಸಿಗಳು. ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಆಟವಾಡುತ್ತಿದ್ದರು. ಆದರೆ, ಮನೆಯೊಳಗೆ ಬಿಟ್ಟು ಹೊರಗೆ ಹೋಗಿ ಆಟವಾಡಿಕೊಳ್ಳುವಂತೆ ಮನೆಯವರು ಕಳುಹಿಸಿದ್ದಾರೆ. […]