Crime News: ಬಿಹಾರದಲ್ಲಿ ಕಳ್ಳಭಟ್ಟಿ ಪ್ರಕರಣ; ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆ!
ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ವಿಷಪೂರಿತ ಕಳ್ಳಭಟ್ಟಿ ಸೇವನೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ. ಸರ್ಕಾರದ ಅಧಿಕೃತ ಅಂಕಿ- ಅಂಶಗಳ ಪ್ರಕಾರ ಈಗಾಗಲೇ 27 ಜನರು ಸಾವನ್ನಪ್ಪಿದ್ದಾರೆ. ಅಸ್ವಸ್ಥಗೊಂಡ ಹಲವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಐವರು ರೋಗಿಗಳು ಸಾವನ್ನಪ್ಪಿದ್ದಾರೆ. ಹಲವು ರೋಗಿಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಪರಹಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಪುರದ ವೀರೇಂದ್ರ ಸಾಹ್, ಹರ್ಸಿದ್ಧಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾನೇಜ್ ಮಹತೋ ಹಾಗೂ ಬ್ರಿಜೇಶ್ ಯಾದವ್ […]