Karnataka Assembly Election: ವರುಣಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ!
ಮೈಸೂರು : ವರುಣಾ ಕ್ಷೇತ್ರದಿಂದ (Varuna Constituency) ಸ್ಪರ್ಧಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ. ನಂಜಗೂಡಿನಲ್ಲಿ (Nanjangud) ನಡೆದ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಸಮಾವೇಶದಲ್ಲಿ ಮಾತನಾಡಿದ ಅವರು, ಇದು ನನ್ನ ಕೊನೆಯ ಚುನಾವಣೆ. ಹೀಗಾಗಿ […]
