ರಾಜ್ಯದಲ್ಲಿ ನೀರಿನ ಬಿಲ್ ಏರಿಕೆ; ಸದ್ಯದಲ್ಲಿಯೇ ಗ್ರಾಹಕರಿಗೆ ಮತ್ತೊಂದು ಶಾಕ್!
ಸಿಲಿಕಾನ್ ಸಿಟಿಯಲ್ಲಿ ನೀರು ಬಳಕೆ ಶುಲ್ಕ ಏರಿಕೆಯಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಡಿಸಿಎಂ ಡಿ.ಕೆ. ಶಿವಕುಮಾರ್ ನಿನ್ನೆ ಸಂಜೆ ಕಾವೇರಿ ಭವನಕ್ಕೆ ಭೇಟಿ ನೀಡಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೈಗೊಂಡಿರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಲಮಂಡಳಿ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಕುರಿತು ಅಧಿಕಾರಿಗಳು ಡಿಸಿಎಂಗೆ ಮಾಹಿತಿ ನೀಡಿದರು. 2014ರಿಂದಲೂ ನೀರಿನ ದರ ಪರಿಷ್ಕರಣೆ ಮಾಡಲಾಗಿಲ್ಲ. ಜಲಮಂಡಳಿ ಬಳಿ ಸಿಬ್ಬಂದಿ, ಅಧಿಕಾರಿಗಳಿಗೆ ವೇತನ ನೀಡಲೂ ಹಣವಿಲ್ಲದಂತಾಗಿದೆ ಎಂದು ಹೇಳಿದ್ದಾರೆ […]