Firing: ಶಾಲೆಯಲ್ಲಿ ಫೈರಿಂಗ್ ಮಾಡಿ 8 ಮಕ್ಕಳ ಸಾವಿಗೆ ಕಾರಣನಾದ ವಿದ್ಯಾರ್ಥಿ! ಹಲವರ ಸ್ಥಿತಿ ಗಂಭೀರ!
ಬಾಲಕನೊಬ್ಬ ಗುಂಡಿನ ದಾಳಿ ನಡೆಸಿದ ಪರಿಣಾಮ 8 ಜನ ಮಕ್ಕಳು ಸಾವನ್ನಪ್ಪಿರುವ ಘಟನೆ ಸರ್ಬಿಯಾದ (Serbia) ರಾಜಧಾನಿ ಬೆಲ್‌ಗ್ರೇಡ್‌ನ (Belgrade) ಶಾಲೆಯೊಂದರಲ್ಲಿ ನಡೆದಿದೆ. ಅಲ್ಲಿನ ಬೆಲ್ ಗ್ರೇಡ್ ನ ವ್ಲಾಡಿಸ್ಲಾವ್ ರಿಬ್ನಿಕರ್ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 6 ಮಕ್ಕಳು ಹಾಗೂ ಶಿಕ್ಷಕರು ಗಾಯಗೊಂಡಿದ್ದಾರೆ. ಸದ್ಯ ಗುಂಡು ಹಾರಿಸಿದ್ದ 7ನೇ ತರಗತಿಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕ ತನ್ನ ತಂದೆಯ ಬಂದೂಕಿನಿಂದ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋಗಳು ಹರಿದಾಡುತ್ತಿದ್ದು, […]