ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಪೊಲೀಸರು ಸೇರಿ 16 ಜನರ ಬಲಿ!
ಉತ್ತರಾಖಂಡ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು, ಹೈಟೆನ್ಶನ್ ತಂತಿ ಬಿದ್ದ ಪರಿಣಾಮ 16 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಆರು ಜನರಿಗೆ ತೀವ್ರವಾದ ಗಾಯಗಳಾಗಿವೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಸದ್ಯದ ಮಾಹಿತಿ ಪ್ರಕಾರ ಓರ್ವ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹಾಗೂ ಮೂವರು ಗೃಹರಕ್ಷಕ ದಳದ ಸಿಬ್ಬಂದಿ ಸಹ ಬಲಿಯಾಗಿದ್ದಾರೆ. ಬಾಕಿ ಎಲ್ಲ ಮೃತರು ನಮಾಮಿ ಗಂಗೆ ಯೋಜನೆಯ ಸ್ಥಳದಲ್ಲಿ ಕೆಲಸ ಮಾಡುವವರು. ಇನ್ನು ಘಟನೆಯ ಬಗ್ಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.