ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ
ಚಿಕಿತ್ಸೆ ಫಲಕಾರಿಯಾಗದೇ ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 80 ವರ್ಷ ವಯಸ್ಸಿನ ಚಾಂಡಿ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಸುದ್ದಿಯನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜನ್ ಟ್ವಿಟರ್ ಮೂಲಕ ಖಚಿತಪಡಿಸಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳದ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಉಮ್ಮನ್ ಚಾಂಡಿ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ 4.25ಕ್ಕೆ ಆಸ್ಪತ್ರೆಯಲ್ಲಿ […]