Karnataka Assembly Election: ವರುಣಾದಲ್ಲಿ ಪ್ರಚಾರ ನಡೆಸುತ್ತಿದ್ದಾಗ ಸೋಮಣ್ಣ ಬೆಂಬಲಿಗರ ಮೇಲೆ ಕಲ್ಲು ತೂರಾಟ!
Mysore : ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಸಿದ್ದರಾಮನಹುಂಡಿಯಲ್ಲಿ ಪ್ರಚಾರದ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ (BJP) ಪ್ರಚಾರ ರಥದ ಮೇಲೆ ಕಾಂಗ್ರೆಸ್ (Congress) ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಸಿದ್ದರಾಮಯ್ಯ (Siddaramaiah) ಅವರ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವ ಸಂದರ್ಭದಲ್ಲಿ ಈಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ವೇಳೆ ಬಿಜೆಪಿ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪವಿದ್ದು, ಘಟನೆಗೆ ಸಂಬಂಧಿಸಿ ನಾಗೇಶ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ. ಪ್ರಚಾರಕ್ಕಾಗಿ ಬಿಜೆಪಿ […]
