Kornersite

Crime Just In Karnataka State Uncategorized

ಸೂಟ್ ಕೇಸ್ ನಲ್ಲಿ ಪತ್ತೆಯಾದ ಮಹಿಳೆಯ ಮೃತ ದೇಹ!

ಕೊಡಗಿನ ಪೆರುಂಬಾಡಿ ಚೆಕ್ ಪೋಸ್ಟ್ ಹತ್ತಿರ ಕಾಡು ಪ್ರದೇಶದಲ್ಲಿ ಸೂಟ್ ಕೇಸ್ ವೊಂದರಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಚೆಕ್ ಪೋಸ್ಟ್ ನಿಂದ 3 ಕಿ.ಮೀ ದೂರದಲ್ಲಿ ವಾಟೆಕೊಲ್ಲಿ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎನ್ನಲಾಗಿದೆ