Free Bus Ticket For Women: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ರಾಜ್ಯ; ಚಾಲನೆ ನೀಡಲಿರುವ ಸಿಎಂ!
ಬೆಂಗಳೂರು : ಇಂದಿನಿಂದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಸೇವೆ ಇಂದಿನಿಂದ ಲಭ್ಯವಾಗಲಿದೆ. ಈ ಉಚಿತ ಬಸ್ (Free Bus Ticket For Women) ಪ್ರಯಾಣಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ರಾಜ್ಯಾದ್ಯಂತ ಮಹಿಳಾ ಮಣಿಗಳಿಗೆ ಇಂದಿನಿಂದ ಉಚಿತ ಬಸ್ ಪ್ರಯಾಣ, ಎಲ್ಲಿ ಬೇಕಾದರೂ ಸಂಚಾರ ಮಾಡಬಹುದಾಗಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಪೈಕಿ ಮೊದಲ ಯೋಜನೆಯಾದ ಮಹಿಳೆಯರಿಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡುವ ಶಕ್ತಿ ಯೋಜನೆಗೆ ಇಂದು ಬೆಳಗ್ಗೆ 11ಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. […]