Karnataka Assembly Election: ಜೆಡಿಎಸ್, ಕಾಂಗ್ರೆಸ್ ಭದ್ರಕೋಟೆಗೆ ನುಗ್ಗುತ್ತಿರುವ ಹಿಂದು ಫೈರ್ ಬ್ರ್ಯಾಂಡ್ ಆದಿತ್ಯನಾಥ್!
ಒಕ್ಕಲಿಗರ ಹಾಗೂ ಜೆಡಿಎಸ್, ಕಾಂಗ್ರೆಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಲು ಮುಂದಾಗಿರುವ ಬಿಜೆಪಿ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಇಂದು ರಾಜ್ಯಕ್ಕೆ ಆಹ್ವಾನಿಸಿದ್ದಾರೆ. ಹೀಗಾಗಿ ಇಂದು ರಾಜ್ಯದ ಹಲವೆಡೆ ಸಿಎಂ ಯೋಗಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಬಸವನಬಾಗೇವಾಡಿಯಲ್ಲಿಂದು ಯೋಗಿ ಮತಶಿಕಾರಿ ನಡೆಯಲಿದೆ. ಆದಿತ್ಯನಾಥ್ ಅವರು, 11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ 2.40ಕ್ಕೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಸವೇಶ್ವರರ ದರ್ಶನ ಪಡೆದು […]
